February 2, 2026

ಉಳ್ಳಾಲ: ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಪ್ರಕರಣಕ್ಕೆ ತಿರುವು: ಕಾರು ಚಾಲಕ ಅಪ್ರಾಪ್ತ ಬಾಲಕ-ಪೊಲೀಸ್ ವಶಕ್ಕೆ

0
image_editor_output_image475485928-1664775141924.jpg

ಉಳ್ಳಾಲ:  ಪೊಲೀಸ್ ಸಿಬ್ಬಂದಿ, ಹೆಡ್ ಕಾನ್ಸ್ಟೇಬಲ್ ಲೋಕೇಶ್ ಅವರು ಕರ್ತವ್ಯದಲ್ಲಿದ್ದ ವೇಳೆ ಅವರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿ ಅಪ್ರಾಪ್ತ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಢಿಕ್ಕಿ ಹೊಡೆದ ಕಾರು ಮುಕಚೇರಿಯ ಮನೆಯಲ್ಲಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೋಮವಾರ ದಾಳಿ ನಡೆಸಿದ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಚಾಲಕನನ್ನು ಪೊಲೀಸರು ಸೊಮವಾರ ಸಂಜೆ ವಶಕ್ಕೆ ಪಡೆದಿದ್ದು, ಚಾಲಕ ವಿದ್ಯಾರ್ಥಿಯಾಗಿದ್ದು, ಅಪ್ರಾಪ್ತ ಬಾಲಕ ಎಂದು ಪೊಲೀಸರು ತಿಳಿಸಿದ್ದಾರೆ.

ಉಳ್ಳಾಲ ಮುಕ್ಕಚ್ಚೇರಿ ನಿವಾಸಿಯೊಬ್ಬರಿಗೆ ಸೇರಿದ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಆರೋಪಿ ಚಾಲಕ ಕಾರನ್ನು ನಿಲ್ಲಿಸದೇ, ತಡೆಯಲು ಮುಂದಾದ ಸಂಚಾರಿ ಠಾಣೆಯ ಪೇದೆ ಲೋಕೇಶ್‌ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ. ಗಂಭೀರ ಗಾಯಗೊಂಡ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!