PFI ಸಂಘಟನೆಯೊಂದಿಗೆ ಎಸ್‌ಡಿಪಿಐ ಯಾವುದೇ ಸಂಬಂಧ ಹೊಂದಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ
ನವದೆಹಲಿ: ನಿಷೇಧಿತ ಪಿಎಫ್‌ಐ (PFI) ಸಂಘಟನೆಯೊಂದಿಗೆ ಎಸ್‌ಡಿಪಿಐ (SDPI) ಯಾವುದೇ ಸಂಬಂಧ ಹೊಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಸೆಪ್ಟೆಂಬರ್ 28ರಂದು ಕೇಂದ್ರ ಸರ್ಕಾರ ಪಿಎಫ್‌ಐ (PFI) ಸಂಘಟನೆಯನ್ನು ನಿಷೇಧಿಸಿತು. ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಪಿಎಫ್‌ಐ ಹಾಗೂ ಅದರ 8 ಅಂಗ ಸಂಸ್ಥೆಗಳನ್ನು ನಿಷೇಧಿಸಿತು.
ಎಸ್‌ಡಿಪಿಐ ಎಲ್ಲಾ ಅಗತ್ಯ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ಪಿಎಫ್‌ಐ ನೊಂದಿಗೆ ಯಾವುದೇ ನಂಟಿರುವುದು ಕಂಡುಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.




