February 3, 2026

ಮಲ್ಪೆ: ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ ಮೂವರು ಪ್ರವಾಸಿಗರು:

0
drown

ಉಡುಪಿ: ಸಮುದ್ರದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನ ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಬೆಂಗಳೂರಿನ ನಾಗಸಂದ್ರದ ಪ್ರದೀಪ್, ನಾಗೇಶ್‌ ವೆಂಕಟೇಶನ್ ಹಾಗೂ ರಮೇಶ್‌ ಪ್ರಾಣಾಪಾಯದಿಂದ ಪಾರಾದವರು. ಮೂವರು ಪ್ರವಾಸಕ್ಕೆ ಬಂದು ನೀರಿಗಿಳಿದು ಈಜುವಾಗ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದರು. ಇದನ್ನು ಗಮನಿಸಿದ ಲೈಫ್‌ ಗಾರ್ಡ್ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ ರಕ್ಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!