ಆ್ಯಂಬುಲೆನ್ಸ್ ಗೆ ಕಾರು ಢಿಕ್ಕಿ: ಸ್ಥಳದಲ್ಲಿಯೇ ಐವರು ಮೃತ್ಯು, 12 ಮಂದಿಗೆ ಗಾಯ
ಮುಂಬೈ: ನಿಂತಿದ್ದ ಕಾರು ಮತ್ತು ಅಂಬುಲೆನ್ಸ್‍ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಬಳಿ ನಡೆದಿದೆ.
ಬುಧವಾರ ಮುಂಜಾನೆ 3:30ರ ಸುಮಾರಿಗೆ ಆಂಬುಲೆನ್ಸ್ ಮತ್ತು ಇತರ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವೇಳೆ ಈ ಘಟನೆ ನಡೆದಿದೆ.
ಈ ಮುನ್ನವೇ ಮೊನ್ನೆ ರಾತ್ರಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಬಾಂದ್ರಾದಲ್ಲಿ ವರ್ಲಿ ಲೇನ್‍ಗೆ ಕರೆದೊಯ್ಯಲು ಅಂಬುಲೆನ್ಸ್ ಕರೆಸಿ ಸಿದ್ಧತೆ ನಡೆಸಲಾಗುತ್ತಿತ್ತು. ಆದರೆ ಇದೇ ವೇಳೆ ಅತಿವೇಗವಾಗಿ ಬಂದ ಕಾರೊಂದು ವಾಹನಕ್ಕೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ.
ಈ ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‍ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣಹಾನಿಯಾಗಿದೆ.
ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಾಂತ್ವದ ಹೇಳಿದ್ದಾರೆ.




