February 1, 2026

ರಾಜ್ಯದ 25 ವಿಧಾನ ಪರಿಷತ್ ಸ‍್ಥಾನಗಳಿಗೆ ಚುನಾವಣೆಗೆ ದಿನಾಂಕ ಪ್ರಕಟ

0
image_editor_output_image1484911399-1636446750977.jpg

ಬೆಂಗಳೂರು: ರಾಜ್ಯದ 25 ವಿಧಾನ ಪರಿಷತ್ ಸ‍್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಕರ್ನಾಟಕ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿ.10 ರಂದು ಚುನಾವಣೆ ನಡೆಯಲಿದ್ದು, ಡಿ.25 ರಂದು 25 ಸ್ಥಾನಗಳ ಫಲಿತಾಂಶ ಹೊರ ಬೀಳಲಿದೆ. ನವೆಂಬರ್ 16 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

ನವೆಂಬರ್ 23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನವೆಂಬರ್ 24 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು ಮತ್ತು ನವೆಂಬರ್ 26 ರೊಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿರುತ್ತದೆ. ಡಿ.10 ರಂದು ಬೆಳಿಗ್ಗೆ 10 ರಿಂದ ಸಂಜೆ 4 ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Leave a Reply

Your email address will not be published. Required fields are marked *

error: Content is protected !!