December 15, 2025

ನಿರ್ಮಾಣ ಹಂತದಲ್ಲಿದ್ದ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ: ಮಾಲಕ ಸೇರಿ ಇಬ್ಬರು ಮಕ್ಕಳು ಸಜೀವ ದಹನ

0
image_editor_output_image193959780-1664959009126.jpg

ಆಗ್ರಾ : ನಿರ್ಮಾಣ ಹಂತದಲ್ಲಿದ್ದ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಮಾಲಕ ಸೇರಿ ಇಬ್ಬರು ಮಕ್ಕಳು ಸಜೀವ ದಹನಗೊಂಡ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ಬುಧವಾರ ಸಂಭವಿಸಿದೆ.

ಮುಂಜಾನೆ ಈ ಅವಘಡ ಸಂಭವಿಸಿದ್ದು ಕಟ್ಟಡದ ಮಾಲಕ ವೈದ್ಯ ಹಾಗೂ ಇಬ್ಬರು ಮಕ್ಕಳು ಕಟ್ಟಡದ ಮೇಲಿನ ಅಂತಸ್ತಿನಲ್ಲಿ ಮಲಗಿದ್ದರು ಎನ್ನಲಾಗಿದೆ ಈ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ, ಬೆಂಕಿಯ ಕೆನ್ನಾಲಿಗೆ ಮೇಲೆ ವ್ಯಾಪಿಸುತಿದ್ದಂತೆ ಮೇಲಿನ ಅಂತಸ್ತಿನಲ್ಲಿ ಮಲಗಿದ್ದ ಮೂವರು ಹೊರಗೆ ಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಗ್ರಾ ನಗರ ಪೊಲೀಸ್ ಮುಖ್ಯಸ್ಥ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಕಟ್ಟಡ ವೈದ್ಯರ ಒಡೆತನದಲ್ಲಿತ್ತು ಎನ್ನಲಾಗಿದೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!