ವಿದ್ಯುತ್ ಕಂಬಕ್ಕೆ ಕಟ್ಟಿ ಐವರು ಮುಸ್ಲಿಮರಿಗೆ ಲಾಠಿಯಿಂದ ಥಳಿಸಿದ ಪೊಲೀಸರು: ಪ್ರಕರಣದ ತನಿಖೆಗೆ ಆದೇಶ
ಅಹಮದಾಬಾದ್: ಐವರು ಮುಸ್ಲಿಂ ಯುವಕರನ್ನು ಸಾರ್ವಜನಿಕರ ಎದುರಲ್ಲೇ ಪೊಲೀಸರು ವಿದ್ಯುತ್ ಕಂಬಕ್ಕೆ ಕಟ್ಟಿ, ಲಾಠಿಯಿಂದ ಥಳಿಸಿದ್ದಾರೆ. ಈ ದೃಶ್ಯಗಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತ ಗುಜರಾತ್ ಪೊಲೀಸ್ ಇಲಾಖೆ, ಪ್ರಕರಣದ ತನಿಖೆಗೆ ಬುಧವಾರ ಆದೇಶಿಸಿದೆ.
‘ವಿಡಿಯೊವನ್ನು ಪರಿಗಣಿಸಿ ತನಿಖೆಗೆ ಆದೇಶ ನೀಡ ಲಾಗಿದೆ’ ಎಂದು ಡಿಜಿಪಿ ಆಶಿಶ್ ಭಾಟಿಯಾ ಹೇಳಿದ್ದಾರೆ. ಖೇಡ ಜಿಲ್ಲೆಯ ಉಂಧೆಲ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ.
ಸೋಮವಾರ ರಾತ್ರಿ ಗ್ರಾಮದ ದೇವಾಲಯದಲ್ಲಿ ಗರ್ಬಾ ನೃತ್ಯ ಕಾರ್ಯಕ್ರಮ ಆಯೋಜಿಸ ಲಾಗಿತ್ತು. ದೇವಾಲಯದ ಗೋಡೆಗೆ ಹೊಂದಿಕೊಂಡಂತೆ ಮಸೀದಿ ಇದ್ದು, ಕೆಲವು ಮುಸ್ಲಿಂ ಯುವಕರು ಕಾರ್ಯ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.




