ವಿಟ್ಲ: ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಬಿದ್ದ ಕಂಟೈನರ್ ಲಾರಿ
ವಿಟ್ಲ: ಕಂಟೈನರ್ ಲಾರಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬುಡೋಳಿ ವಿಸ್ಡಮ್ ಶಾಲಾ ಬಳಿ ಪಲ್ಟಿಯಾಗಿದೆ. ಈ ಲಾರಿ ಪಲ್ಟಿ ಹೊಡೆಯುತ್ತಿದ್ದ ವೇಳೆ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ.





