February 2, 2026

ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ: ಬಿಜೆಪಿ ಶಾಸಕನ ಚಿಕ್ಕಪ್ಪ ಮೃತ್ಯು

0
image_editor_output_image-1265290719-1665046441033.jpg

ಧಾರವಾಡ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ ಅವರು ಮೃತಪಟ್ಟಿದ್ದಾರೆ.

ಬುಧವಾರ ತಡರಾತ್ರಿ ಧಾರವಾಡದ ಎಸ್ಪಿ ಕಚೇರಿ ಎದುರು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಿವಣ್ಣ ಅವರನ್ನು ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಶಿವಣ್ಣ ಅವರು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಹೋದರರಾಗಿದ್ದರು. ವಿದ್ಯಾವರ್ಧಕ ಸಂಘದ ಹಿಂದಿನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.  ಇನ್ನು ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಅಪಘಾತ ನಡೆದಿತ್ತು. ಸದ್ಯ ಉಪನಗರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಂತ್ಯಕ್ರಿಯೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!