March 23, 2026

ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

0
image_editor_output_image-536288601-1665120790565.jpg

ಬೆಳಗಾವಿ: ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ನಗರ ನಡೆದಿದೆ.

ಮೃತರನ್ನು ಬೆಳಗಾವಿ ತಾಲೂಕಿನ ಸುಳೆಭಾವಿ ಗ್ರಾಮದ ಮಹೇಶ್ ರಾಮಚಂದ್ರ ಮುರಾರಿ (25) ಹಾಗೂ ಪ್ರಕಾಶ್ ಪಾಟೀಲ (22) ಎಂದು ಗುರುತಿಸಲಾಗಿದೆ.

ಸುಳೆಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಗುಂಪು ಘರ್ಷಣೆಗೆ ಹಳೆಯ ವೈಷಮ್ಯವೇ ಕಾರಣ ಎಂದು ತಿಳಿದು ಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.

Leave a Reply

Your email address will not be published. Required fields are marked *

error: Content is protected !!