ಕಡಬ: ಕೊಲೆಯತ್ನ ನಡೆಸಿ ದರೋಡೆ
ಕಡಬ: ಕೊಲೆಯತ್ನ ನಡೆಸಿ ದರೋಡೆ ಮಾಡಿರುವ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ತಿರುಚಿದ್ದಾರೆಂಬ ಆರೋಪ ಕೇಳಿಬಂದಿದೆ.
ಉಪ್ಪಿನಂಗಡಿ ಪೊಲೀಸರು ಸಂತ್ರಸ್ತನ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡದೇ, ಮಹಜರು ಹೇಳಿಕೆಯನ್ನು ಓದಿ ಹೇಳದೇ ಸಹಿ ಪಡೆದು ಹೋಗಿ ಆರೋಪಿಗಳ ವಿರುದ್ಧ ಸಡಿಲ ಸೆಕ್ಷನ್ ಗಳನ್ನು ಹಾಕಿದ್ದಾರೆ ಎಂದು ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಅಲಂಗ ನಿವಾಸಿ ಜಾಯ್ ವಿ.ಡಿ ಎಂಬವರ ಕುಟುಂಬಸ್ಥರು ಆರೋಪಿಸಿದ್ದಾರೆ.
ತನ್ನನ್ನು ಕೊಲ್ಲಲು ಯತ್ನಿಸಿ, ಜೀವ ಬೆದರಿಕೆ ಒಡ್ಡಿ, ದರೋಡೆ ಮಾಡಿರುವುದಾಗಿ ಅಲಂಗ ನಿವಾಸಿ ಜಾಯ್ ವಿ.ಡಿ ಅವರು ತನ್ನ ಪರಿಯಸ್ಥರೇ ಆಗಿರುವ ನವನೀತ್, ರಾಹುಲ್ ಹಾಗೂ ಸುಜಿತ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ಆದರೆ ಆರೋಪಿಗಳ ವಿರುದ್ಧ ಕೊಲೆಯತ್ನ, ದರೋಡೆ ಸೆಕ್ಷನ್ ಗಳನ್ನು ದಾಖಲಾಗಿಲ್ಲ. ಹೀಗಾಗಿ ಪೊಲೀಸರು ಪ್ರಕರಣವನ್ನು ತಿರುಚಲು ಯತ್ನಿಸುತ್ತಿದ್ದಾರೆಂದು ಆರೋಪಿಸಿರುವ ಜಾಯ್ ವಿ.ಡಿ ಅವರ ಕುಟುಂಬಸ್ಥರು ಸಾಕ್ಷಿಗಳ ಸಮಕ್ಷ ಸಂತ್ರಸ್ತ ವ್ಯಕ್ತಿಯ ಮರುಹೇಳಿಕೆ ಪಡೆಯುವಂತೆ ಒತ್ತಾಯ ಮಾಡಿದ್ದಾರೆ.




