ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ತಡರಾತ್ರಿ ಪೊಲೀಸ್ ವಶಕ್ಕೆ
ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ಮಧ್ಯರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಫೇಸ್ ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿ ಸುನೀಲ್ ಬಜಿಲಕೇರಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದೆನ್ನಲಾಗಿದ್ದು, ಸದ್ಯ ಅವರನ್ನು ಉರ್ವ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ಅವರನ್ನು ಊರ್ವ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.





