March 23, 2026

ಮಹಾರಾಷ್ಟ್ರ: ಟ್ರಕ್‌ಗೆ ಬಸ್ ಢಿಕ್ಕಿ: 10 ಮಂದಿ ಮೃತ್ಯು

0
image_editor_output_image1149488010-1665205672358.jpg

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಂದು ಮುಂಜಾನೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ.

ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ.

ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!