March 23, 2026

ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರಕಾರ ಅನುಮತಿ

0
image_editor_output_image532731482-1665206026258.jpg

ಉಡುಪಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿ ಖರೀದಿಸಿ, ಪಡಿತರ ವ್ಯವಸ್ಥೆಯಡಿ ವಿತರಿಸಲು ಕೇಂದ್ರ ಸರಕಾರ ಅನುಮತಿ ಕಲ್ಪಿಸಿದೆ.

ಕಳೆದ ವರ್ಷ ಕೇಂದ್ರ ಸರಕಾರ ಸ್ಥಳೀಯ ಕುಚ್ಚಲಕ್ಕಿ ಖರೀದಿಸಿ, ವಿತರಿಸಲು ಅನುಮತಿ ನೀಡುವಾಗ ವಿಳಂಬವಾಗಿದ್ದರಿಂದ ಸ್ಥಳೀಯ ಕುಚ್ಚಲಕ್ಕಿ ಲಭ್ಯವಿರಲಿಲ್ಲ. ಆಂಧ್ರ ಸಹಿತ ಹೊರ ರಾಜ್ಯದ ಕುಚ್ಚಲಕ್ಕಿಯನ್ನೇ ವಿತರಿಸಲಾಗಿತ್ತು.

ಪ್ರಸಕ್ತ ಸಾಲಿನಲ್ಲಿ ಖರೀದಿಗೆ ಈಗಾಗಲೇ ಅನುಮೋದನೆ ನೀಡಿರುವುದರಿಂದ ಸ್ಥಳೀಯ ಕುಚ್ಚಲಕ್ಕಿ ಹೆಚ್ಚು ಸಿಗಬಹುದು. ಈ ತಿಂಗಳಿನಲ್ಲಿ ಕಟಾವು ಪ್ರಕ್ರಿಯೆ ಶುರುವಾಗಲಿದೆ.

ಆದಷ್ಟು ಬೇಗ ಭತ್ತ ಖರೀದಿ ಕೇಂದ್ರವನ್ನು ಆರಂಭಿಸಿ, ರೈತರಿಗೆ ಸೂಕ್ತ ಮಾಹಿತಿ ನೀಡುವ ಕಾರ್ಯ ರಾಜ್ಯ ಸರಕಾರ ಹಾಗೂ ಕೃಷಿ ಇಲಾಖೆ, ಜಿಲ್ಲಾಡಳಿತ ಮಾಡಬೇಕಿದೆ.

Leave a Reply

Your email address will not be published. Required fields are marked *

error: Content is protected !!