March 23, 2026

ಹಸುವಿಗೆ ಢಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ರೈಲಿನ ಮುಂಭಾಗಕ್ಕೆ ಹಾನಿ

0
image_editor_output_image-771641674-1665208051669.jpg

ಗಾಂಧಿನಗರ: ಇತ್ತೀಚೆಗಷ್ಟೇ ಆರಂಭವಾಗಿದ್ದ ಗಾಂಧಿನಗರ-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅ.8 ರಂದು ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು. ಇದೀಗ ಅ.9 ರಂದು ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ.

ಗುಜರಾತ್‍ನ ಆನಂದ್ ರೈಲ್ವೇ ನಿಲ್ದಾಣದ ಸಮೀಪ ಏಕಾಏಕಿ ಹಸುವಿಗೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಅ.8 ರಂದು ಗುಜರಾತ್‍ನ ವತ್ವಾ ರೈಲು ನಿಲ್ದಾಣದ ಬಳಿ ಟ್ರ್ಯಾಕ್‍ನಲ್ಲಿ ಎಮ್ಮೆಗಳಿಗೆ ರೈಲು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ 4 ಎಮ್ಮೆಗಳು ಸಾವನ್ನಪ್ಪಿದ್ದವು. ರೈಲಿನ ಮುಂಭಾಗ ಹೊಡೆದು ಹೋಗಿತ್ತು.

Leave a Reply

Your email address will not be published. Required fields are marked *

error: Content is protected !!