ಚಿರತೆಯ ಮುಖವನ್ನು ಬಳಸಿ ಗರ್ಭಿಣಿಯರಿಗೆ ಅವಹೇಳನ ಆರೋಪ: ಸಾಮಾಜಿಕ ಕಾರ್ಯಕರ್ತ ಸುನಿಲ್ ಬಾಜಿಲಕೇರಿಗೆ ಜಾಮೀನು ಮಂಜೂರು
ಮಂಗಳೂರು: ಚಿರತೆಯ ಮುಖವನ್ನು ಬಳಸಿ ಗರ್ಭಿಣಿಯರಿಗೆ ಅವಹೇಳನ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಾಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದು ಇದೀಗ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಶುಕ್ರವಾರ ರಾಟ್ರಿ ಬಜಪೆ ಪೊಲೀಸರು ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿಯನ್ನು ಬಂಧಿಸಿದ್ದರು. ನ್ಯಾಯಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದರೆ ಇದೀಗ ನ್ಯಾಯಾಲಯವು ಸುನಿಲ್ ಬಜಿಲಕೇರಿಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.




