March 23, 2026

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ: ಆರೋಪಿಯನ್ನು ಬಂಧಿಸಿದ ಪೊಲೀಸರು

0
image_editor_output_image1161926503-1665232837170.jpg

ಪುತ್ತೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಕಾಸರಗೋಡು ಮಂಜೇಶ್ವರ ತಾಲೂಕು ಹೊಸಂಗಡಿ ಮಿಜಿರಪಲ್ಲ ಮುಸ್ತಫ್ ಎಂಬವರ ಪುತ್ರ ಮಹಮ್ಮದ್ ಶಫೀಕ್ ಬಂಧಿತ ಆರೋಪಿ.

ಪಾಟ್ರಕೋಡಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಪ್ರಕರಣ
ಪತ್ತೆ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಈ ಪೈಕಿ 2ನೇ ಆರೋಪಿ ಕಾಸರಗೋಡು ಮಂಜೇಶ್ವರ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ನ್ಯಾಯಾಲಯದಲ್ಲಿ ತಲೆಮರೆಸಿಕೊಂಡಿದ್ದ. ವಿಚಾರಣೆಗೆ ಹಾಜರಾಗದ ನ್ಯಾಯಾಲಯ ಆರೋಪಿ ಮೇಲೆ ವಾರಂಟ್ ಜಾರಿ ಮಾಡಿತ್ತು.

Leave a Reply

Your email address will not be published. Required fields are marked *

error: Content is protected !!