March 23, 2026

ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ: ಟಿಪ್ಪು ಪರಂಪರೆಯನ್ನು ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ; ಬಿಜೆಪಿ ಗುಡುಗಿದ ಅಸಾದುದ್ದೀನ್ ಓವೈಸಿ

0
image_editor_output_image-1131232375-1665293080660

ನವದೆಹಲಿ:  ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬೇರೆ ರೈಲಿಗೆ ಒಡೆಯರ್ ಅವರ ಹೆಸರು ಇಡಬಹುದಿತ್ತು. ಬ್ರಿಟಿಷರ ವಿರುದ್ಧ ಟಿಪ್ಪು ಸುಲ್ತಾನ್ ಹೋರಾಟ ಮಾಡಿದ್ದು, ಟಿಪ್ಪು ಪರಂಪರೆಯನ್ನು ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ ಎಂದರು.

ಇನ್ನು ಬಿಜೆಪಿ ಸರ್ಕಾರ ಟಿಪ್ಪು ಎಕ್ಸ್‌ ಪ್ರೆಸ್ ಅನ್ನು ಒಡೆಯರ್ ಎಕ್ಸ್‌ ಪ್ರೆಸ್ ಎಂದು ಮರುನಾಮಕರಣ ಮಾಡಿದೆ. ಬ್ರಿಟಿಷರ ವಿರುದ್ಧ ಟಿಪ್ಪು 3 ಯುದ್ಧಗಳನ್ನು ಮಾಡಿದ ಕಾರಣಕ್ಕಾಗಿ ಬಿಜೆಪಿಯನ್ನು ಕೆರಳಿಸುತ್ತಾನೆ. ಇನ್ನೊಂದು ರೈಲಿಗೆ ಒಡೆಯರ್ ಹೆಸರಿಡಬಹುದಿತ್ತು. ಟಿಪ್ಪು ಪರಂಪರೆಯನ್ನು ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!