ಸುಳ್ಯ: ಸರಕಾರಿ ಆಸ್ಪತ್ರೆಯ ಸಮೀಪ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸ್ಥಳದಲ್ಲಿ ಆತಂಕ ಪರಿಸ್ಥಿತಿ ನಿರ್ಮಾಣ
ಸುಳ್ಯ: ಇಲ್ಲಿಯ ಸರ್ಕಾರಿ ಆಸ್ಪತ್ರೆಯ ಬಳಿ ಮಾರುತಿ 800 ಕಾರಿನೊಳಗೆ ವ್ಯಕ್ತಿಯೋರ್ವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು ಪರಿಸರ ದುರ್ನಾಥದಿಂದ ಘಟನೆ ಬೆಳಕಿಗೆ ಬಂದಿದೆ.
ಮೃತಪಟ್ಟ ವ್ಯಕ್ತಿ ಸುಳ್ಯ ಪೆರಾಜೆ ಮೂಲದವರು ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಬೇಕಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ವಿಭಾಗದ ಡಿವೈಎಸ್ಪಿ ವೀರಯ್ಯ ಹಿರೇಮಠ, ಹಾಗೂ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ



