February 3, 2026

ಕಾಸರಗೋಡು : ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ

0
image_editor_output_image934769662-1665370434822

ಕಾಸರಗೋಡು : ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು.

ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರ. ಈ ಕೆರೆಗೆ ಭಕ್ತರೂ ಇಳಿಯುತ್ತಿದ್ದರು ಆದರೆ ಇದುವರೆಗೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲ ಎಂದು ಇಲ್ಲಿನ ಸ್ಥಳೀಯರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!