ಸಮಾಜವಾದಿ ಪಕ್ಷದ ಮುಖ್ಯಸ್ಥ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ
ಹೊಸದಿಲ್ಲಿ:ಸಮಾಜವಾದಿ ಪಕ್ಷದ ಮುಖ್ಯಸ್ಥ,ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 2 ರಂದು ತೀವ್ರ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.




