February 2, 2026

ವಿಟ್ಲ: ಮನೆಬಿಟ್ಟು ಪರಾರಿಯಾದ ಇಬ್ಬರು ಅಪ್ರಾಪ್ತ ಬಾಲಕಿಯರು: ವಿಟ್ಲ ಪೇಟೆಯಲ್ಲಿ ನಿಂತಿದ್ದ ಅಮಾಯಕ ಬೇರೆ ಇಬ್ಬರು ಬಾಲಕಿಯರಿಗೆ ಹಿಗ್ಗಾಮುಗ್ಗ ಥಳಿಸಿದ ಯುವಕರು

0
IMG-20220615-WA0046

ವಿಟ್ಲ: ಇಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾಲಕಿಯರು ಮನೆ ಬಿಟ್ಟು ತೆರಳಿದ್ದು, ಅವರ ಹುಡುಕಿಕೊಂಡು ಬಂದ ಊರಿನವ ಯುವಕರು ದಾರಿಯಲ್ಲಿ ಸಿಕ್ಕಿದ ಅಮಾಯಕ ಬೇರೆ ಇಬ್ಬರು ಬಾಲಕಿಯರಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದೆ.

ಸಾಲೆತ್ತೂರು ನಿವಾಸಿ ಆಟೋ ಚಾಲಕನ ಪುತ್ರಿ ತನ್ನ ಸ್ನೇಹಿತೆ ಮತ್ತೊಬ್ಬಳು ಯುವತಿ ಜತೆ ಮನೆಯಲ್ಲಿ ಯಾರಲ್ಲಿಯೂ ಹೇಳದೇ ಮನೆಬಿಟ್ಡು ತೆರಳಿದ್ದರು.‌ಈ ಬಗ್ಗೆ ಎಲ್ಲ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಕೆಲ ಸ್ವಯಂ ಘೋಷಿತ ಸಮಾಜ ಸೇವಕರು ಅವರನ್ನು ಹುಡುಕಲು ಪ್ರಾರಂಭಿಸಿದ್ದಾರೆ. ವಿಟ್ಲಯಲ್ಲಿ ಹುಡುಕಾಡುತ್ತಿದ್ದಾಗ ಕುದ್ದುಪದವು ಮೂಲದ ಇಬ್ಬರು ಯುವತಿಯರು ಕಾಣಿಸಿದ್ದು, ಅವರಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಬುರ್ಖಾ ತೆಗೆದಾಗ ಅವರು ಬೇರೆಯವರು ಎಂದು ತಿಳಿದಾಗ ಪೇಚಿಗೆ ಸಿಲುಕಿದ್ದಾರೆ. ಬಳಿಕ ಸಾರ್ವಜನಿಕರು ಹಲ್ಲೆ ನಡೆಸಿದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ‌.

ನಾಪತ್ತೆಯಾಗಿದ್ದ ಇಬ್ಬರು ಪುತ್ತೂರು ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದು, ಅವರನ್ನು ವಿಟ್ಲ ಠಾಣೆಗೆ ಕರೆಯಿಸಿ, ಬುದ್ದಿವಾದ ಹೇಳಿ ಮನೆಯವರ ಜತೆ ಕಳುಹಿಸಿಕೊಟ್ಟಿದ್ದಾರೆ.

ಹಲ್ಲೆಗೊಳಗಾದ ಇಬ್ಬರು ಬಾಲಕಿಯರು ಆಸ್ಪತ್ರೆಗೆ ದಾಖಲಾಗಿದ್ದು, ವಿಟ್ಲ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಮನೆಯಿಂದ ಪರಾರಿಯಾದ ಇಬ್ನರು ಬಾಲಕಿಯರ ಪೈಕಿ ಒಬ್ಬಾಕೆ ಕೇರಳದವಳಾಗಿದ್ದು, ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದಾರೆ. ಅಮಾಯಕ ಬಾಲಕಿಯರನ್ನು ವಿಚಾರಿಸದೇ ನೇರವಾಗಿ ಬಂದು ಹಲ್ಲೆ ನಡೆಸಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿಟ್ಲದ ಮುಸ್ಲಿಂ ಮುಖಂಡರು ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಘಟನೆ ಸಂಬಂಧಿಸಿ, ಆರೋಪಿ ಪಕ್ಷಯೊಂದರ ಕಾರ್ಯಕರ್ತ ಆರೀಫ್ ಕರೈ ಪೊಲೀಸರ ವಶದಲ್ಲಿದ್ದಾನೆ. ಇನ್ನೊಬ್ಬ ಕೊಳ್ನಾಡು ನಿವಾಸಿ ಹಕೀಂ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!