February 2, 2026

ಕಡಬ: ರೈಲು ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

0
image_editor_output_image337221529-1665467621810.jpg

ಕಡಬ: ಇಲ್ಲಿನ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಣದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ನಡೆದಿದ್ದ ತನ್ನ ಮಗಳು ಭಾಗವಹಿಸಿದ್ದ ಕ್ರೀಡಾಕೂಟಕ್ಕೆ ತೆರಳಿ ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಎಂಬವರ ಜೊತೆ ಬಂದಿಳಿದಿದ್ದರು. ಬಳಿಕ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಡುತ್ತಿದ್ದಾಗ ಏಕಾಏಕಿ ರೈಲು ಇಂಜಿನ್ ಬಂದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಒಂದು ಕೈ ಮತ್ತು ಕಾಲು ನಷ್ಟವಾಗಿ ರೈಲ್ವೆ ಹಳಿ ಬದಿಗೆ ಎಸೆಯಲ್ಪಟ್ಟು ಸಾವಿನ ದವಡೆಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!