ವಿಟ್ಲ: ಕನ್ಯಾನ ಗ್ರಾಮದ ಪೊಯ್ಯಗದ್ದೆ ನಿವಾಸಿ ಮೊಹಿದು ಕುಂಞ ಅವರ ಪುತ್ರ ಅಶ್ರಪ್ ಯಾನೆ ಜಕ್ಕಾ ಅಶ್ರಪ್(45) ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಬಗ್ಗೆ ಚಿಕಿತ್ಸೆ ಪಡೆದಿದ್ದರು. ಇಂದು ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಒಬ್ಬ ಪುತ್ರ ಇದ್ದಾರೆ.