February 3, 2026

ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವದ ಫ್ಲೆಕ್ಸ್ ಹರಿದ ಪ್ರಕರಣ: ಆರೋಪಿಗಳಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಬಂಧನ

0
image_editor_output_image736788763-1665502744905

ಮಂಗಳೂರು: ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವದ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ಟೋಬರ್ 8 ರಂದು ಮಧ್ಯರಾತ್ರಿ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಈ ಮೂವರು ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಅನುಮಾನಗೊಳಿಸುವ ಉದ್ದೇಶದಿಂದ ಕೃತ್ಯವನ್ನು ಎಸಗಿದ್ದರು. ಇವರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!