February 3, 2026

ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು BJP ಮುಖಂಡ ಆತ್ಮಹತ್ಯೆ

0
image_editor_output_image-874475745-1665551391112.jpg

ಮಹಾರಾಷ್ಟ್ರ: ಮಹಾರಾಷ್ಟ್ರದ ಬಿಜೆಪಿ ಮುಖಂಡರೊಬ್ಬರು ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಭಗೀರಥ ಬಯಾನಿ ಆತ್ಮಹತ್ಯೆಗೈದವರು. ಲೈಸೆನ್ಸ್ ಹೊಂದಿದ ತಮ್ಮ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಮಂಗಳವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೀರಾ ನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಕೊಠಡಿ ಬಾಗಿಲು ಹಾಕಿಕೊಂಡು ಕೃತ್ಯ ಎಸಗಿದ್ದಾರೆ.

ಗುಂಡಿನ ಶಬ್ದ ಕೇಳಿದ ಕೂಡಲೇ ಮನೆಯವರು ಓಡಿ ಬಂದಿದ್ದು, ಕೊಠಡಿ ಬಾಗಿಲು ಒಡೆದು ಒಳ ಪ್ರವೇಶಿಸಿದ್ದಾರೆ. ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಯಾನಿ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟರು.

ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅವರು ಬೀಡ್ ಜಿಲ್ಲಾ ಬಿಜೆಪಿ ಘಟಕದ ಮುಖ್ಯಸ್ಥರಾಗಿದ್ದರು.

Leave a Reply

Your email address will not be published. Required fields are marked *

error: Content is protected !!