February 3, 2026

ಬಸ್‌ನ ಇಂಧನ ಟ್ಯಾಂಕ್‌ ಸ್ಫೋಟ: ಮೂವರು ಬೈಕ್ ಸವಾರರು ಮೃತ್ಯು

0
image_editor_output_image2105344736-1665553225747.jpg

ಬಿಹಾರ: ಬಿಹಾರದ ಚಾಪ್ರಾ-ಸಿವಾನ್ ಹೆದ್ದಾರಿಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡಿದ್ದು, ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಬೈಕ್‌ ಸವಾರರು ಪೊಲೀಸ್ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಬಸ್‌ನಡಿ ಸಿಲುಕಿದ ಬೈಕ್‌ ಸವಾರನನ್ನು ಬಸ್ ಸ್ವಲ್ಪ ದೂರದವರೆಗೆ ಎಳೆದೊಯ್ದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೈಕ್‌ ಸವಾರ ಸಜೀವ ದಹನಗೊಂಡಿದ್ದಾನೆ.

ಅಪಘಾತದ ನಂತರ ಬಸ್ ಬೆಂಕಿಗೆ ಆಹುತಿಯಾಗಿದ್ದು, ಕೂಡಲೇ ಪೊಲೀಸ್ ಅಧಿಕಾರಿಗಳು ಬಸ್‌ನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿತಾಬ್ದಿಯಾರಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ 120 ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯಲ್ಲಿ ಬಂದೋಬಸ್ತ್ ಕೈಗೊಂಡ ಬಳಿಕ ಬಸ್ ನಲ್ಲಿ ಸಿಬ್ಬಂದಿಗಳು ಹಿಂತಿರುಗುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!