February 3, 2026

ಮಂಗಳೂರು: ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಗುಂಡು ಹಾರಿಸಿ ಆತ್ಮಹತ್ಯೆ ಯತ್ನ: ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಘಟನೆ

0
image_editor_output_image1254127202-1665562071765

ಮಂಗಳೂರು: ಎನ್‌ಎಂಪಿಟಿಯಲ್ಲಿ ಕರ್ತವ್ಯನಿರತ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನವಮಂಗಳೂರು ಬಂದರು ಪ್ರಾಧಿಕಾರದ ಮುಖ್ಯ ಗೇಟ್ ಬಳಿ ಅ.12ರಂದು ನಡೆದಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್‌ ಎಂದು ಗುರುತಿಸಲಾಗಿದೆ.

ಜ್ಯೋತಿ ಭಾಯಿ ಅವರು ಪರ್ಮರ್‌ ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತಾಗಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿದ್ದಾರೆ.

ಗಂಡ ಓಂಬೀರ್ ಸಿಂಗ್ ಎಂ ಆರ್‌ ಪಿಎಲ್‌ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿದ್ದಾರೆ. ದಂಪತಿಗಳು ಇಬ್ಬರೂ ಭರತ್‌ಪುರ ಜಿಲ್ಲೆ ರಾಜಸ್ಥಾನಕ್ಕೆ ಸೇರಿದವರಾಗಿದ್ದಾರೆ.

ಘಟನೆಗೆ ಕೌಟುಂಬಿಕ ಕಲಹ ಕಾರಣವೆಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!