February 2, 2026

ಮಂಗಳೂರು: ಪಿಎಫ್ಐ ಮತ್ತು ಎಸ್ ಡಿಪಿಐ ಮುಖಂಡರ ಮನೆ ಮೇಲೆ ಮತ್ತೆ ಪೊಲೀಸ್ ದಾಳಿ

0
IMG-20221013-WA0007-750x375.jpg

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ.

ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ ಪೊಲೀಸರು ದಾಳಿ ಮಾಡಿದ್ದಾರೆ.

ಇನ್ನು ಕೆಲದಿನಗಳ ಹಿಂದೆಯಷ್ಟೇ ದೇಶದಲ್ಲಿ ಪಿಎಫ್ ಐ ನಿಷೇಧ ಮಾಡಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಪಿಎಫ್ ಐ ವಿರುದ್ಧ ರಾಜ್ಯದ ಪೊಲೀಸರು ಮತ್ತೆ ಕಾರ್ಯಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!