December 19, 2025

ನವೆಂಬರ್ 11 ರಾಜ್ಯಾದ್ಯಂತ ‘ಒನಕೆ ಓಬವ್ವ ಜಯಂತಿ’ ಆಚರಣೆಗೆ ರಾಜ್ಯ ಸರ್ಕಾರ ಆದೇಶ

0
n3313693941636481909840ab8181ef5f1d0710eaf464c033f9719074afb6832e3bc6a14e7b4b7bdfad91d8.jpg

ಬೆಂಗಳೂರು: ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನವೆಂಬರ್ 11ರಂದು ಒನಕೆ ಓಬವ್ವ ಅವರ ಜನ್ಮ ದಿನವಾಗಿದ್ದು ಈ ದಿನವನ್ನೇ ಓಬವ್ವ ಜಯಂತಿಯನ್ನಾಗಿ ಘೋಷಿಸಲಾಗಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಣೆ ನಡೆಯಲಿದೆ.

ಈ ಕುರಿತಂತೆ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ನಡವಳಿಗಳನ್ನು ಹೊರಡಿಸಿದ್ದು, ಒನಕೆ ಓಬವ್ವ ಹೆಸರು, ಚಿತ್ರದುರ್ಗ ಇತಿಹಾಸದಲ್ಲಿ ಮರೆಯಲಾಗದ್ದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!