February 3, 2026

ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸಾವು: ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಶಂಕೆ

0
image_editor_output_image-248036914-1665663922529.jpg

ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 19 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿರುವ ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಮೃತ ಯುವತಿ ಬೆಂಗಳೂರಿನಲ್ಲಿ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಯುವತಿ ಕಾಲ್ ಸೆಂಟರ್ ಗೆ ಕೆಲಸಕ್ಕೆ ತಬಸ್ಸುಮ್ ಸೇರಿದ್ದರು. ಆದರೆ ಏಕಾಏಕಿ ನಿನ್ನೆ ತಬಸ್ಸುಮ್‍ಳನ್ನು ಅಪರಿಚಿತ ವ್ಯಕ್ತಿಯೊಬ್ಬರು ಬೆಳಗಾವಿ ಜಿಲ್ಲಾಸ್ಪತ್ರೆ ಗೆ ದಾಖಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!