February 4, 2026

ಮತ್ತಿಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್‌ ದಾಖಲು

0
image_editor_output_image576536341-1665723029461.jpg

ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಲ್ಲಿನ ನಜರಬಾದ್‌ ಠಾಣೆಯಲ್ಲಿ ಗುರುವಾರ ತಡರಾತ್ರಿ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

ಮುರುಘಮಠದ ಶರಣರ ವಿರುದ್ಧ ಮತ್ತಿಬ್ಬರು 12 ಹಾಗೂ 14 ವರ್ಷದ ಬಾಲಕಿಯರ ತಾಯಿ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದಾರೆ.

ಮಠದಲ್ಲಿ‌ ಕೆಲಸ ಮಾಡುತ್ತಿದ್ದ ನೌಕರೆಯೊಬ್ಬರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅದರಂತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಯಿತು.

ಮಕ್ಕಳ ಮೇಲೆ ದೌರ್ಜನ್ಯ ನಡೆಸಲು ಶರಣರು, ವಾರ್ಡನ್‌ ರಶ್ಮಿಯವರ ಮೂಲಕ ತಮ್ಮ ಖಾಸಗಿ ಕೊಠಡಿಗೆ ಕರೆಸಿಕೊಳ್ಳುತ್ತಿದ್ದರು ಎಂಬ ದೂರಿನ ಮೇರೆಗೆ ಶರಣರನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ. ನಂತರದ ಆರೋಪಿಗಳನ್ನಾಗಿ ವಾರ್ಡನ್‌ ರಶ್ಮಿ, ಬಸವಾದಿತ್ಯ, ಮೈಸೂರಿನ ಭಕ್ತರಾದ ಪರಮಶಿವಯ್ಯ ಮತ್ತು ಗಂಗಾಧರಯ್ಯ, ಮುರುಘಾ ಮಠದ ಬಸವಲಿಂಗ ಮತ್ತು ಕರಿಬಸಪ್ಪ ಅವರನ್ನು ಹೆಸರಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!