February 4, 2026

ಪುತ್ತೂರು: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ಬಂಧನ

0
image_editor_output_image-1502910619-1665732717537.jpg

ಪುತ್ತೂರು: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪೊಲೀಸ್‌ ಉಪನಿರೀಕ್ಷಕ ಶ್ರೀಕಾಂತ್‌ ರಾಥೋಡ್‌ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಫಾರೂಕ್‌ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ಕಂಡು ಬಂದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಫಾರೂಕ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!