ಪುತ್ತೂರು: ಆಟೋ ರಿಕ್ಷಾ ಪಲ್ಟಿ: ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಎಸ್. ಐ ಶೇಷಮ್ಮ
ಪುತ್ತೂರು: ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಪಡೀಲ್ ನಲ್ಲಿ ನಡೆದಿದೆ.
ಘಟನೆಯಿಂದಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಕುಸುಮಾವತಿ ಎಂಬ ಮಹಿಳೆ ಗಾಯಗೊಂಡಿದ್ದು, ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಪುತ್ತೂರು ಮಹಿಳಾ ಠಾಣೆಯ ಎಸ್. ಐ ಶೇಷಮ್ಮ ರವರು ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿ ರಾಧಾಕೃಷ್ಣ ಜೆ.ಬಿ. ರವರು ಕೂಡಲೇ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯು ಮೂಲಕ ಮಾನವೀಯತೆ ಮೆರೆದಿದ್ದಾರೆ.
ಪೊಲೀಸ್ ಜೀಪ್ ನಲ್ಲಿಯೇ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಎಸ್. ಐ ಶೇಷಮ್ಮ ರವರ ಈ ಮಾನವೀಯತೆ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ಗಾಯಗೊಂಡ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.





