March 23, 2026

ಬಂಟ್ವಾಳದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆ: ಕಿಡ್ನಾಪ್ ಪ್ರಕರಣ ದಾಖಲು

0
image_editor_output_image1447060295-1665911680719

ಪುಂಜಾಲಕಟ್ಟೆ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ, ಅಪ್ರಾಪ್ತ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದಾಳೆ.

ಎರಡು ದಿನಗಳ ಹಿಂದೆ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ನಾಪತ್ತೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಕಿಡ್ನಾಪ್ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಎಸ್.ಐ.ಸುತೇಶ್ ಅವರು ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದಾರೆ‌.

ಆರೋಪಿ ಯುವಕ ನೌಶಾದ್ ಪಾಂಡವರಕಲ್ಲು ಬಾಲಕಿಯ ನೆರೆ ಮನೆಯವನಾಗಿದ್ದು, ಈತ ಮೈಸೂರಿನಲ್ಲಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇನ್ನೂ ಈತನ ಸುಳಿವು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

,ಇನ್ನು ಬಾಲಕಿಯನ್ನು ಠಾಣೆಗೆ ಕರೆದುಕೊಂಡು ಬಂದ ಪೊಲೀಸರು ವಿಚಾರಣೆ ನಡೆಸಿದ್ದು, ಸಧ್ಯ ಯುವತಿಯನ್ನು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಬಳಿಕ ರಿಮೈಂಡ್‌ ಹೋಂಗೆ ದಾಖಲೂ ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!