March 23, 2026

ಜೀವಂತ ಹಾವನ್ನು ಸಾರ್ವಜನಿಕವಾಗಿ ಪ್ರದರ್ಶನ: ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು

0
image_editor_output_image872661352-1665936449858

ಚಿಕ್ಕಬಳ್ಳಾಪುರ:  ಜೀವಂತ ಹಾವನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ ಆರೋಪದ ಮೇಲೆ ಇಶಾ ಫೌಂಡೇಶನ್ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲಾಗಿದೆ.

ಉರಗ ತಜ್ಞ ಪೃಥ್ವಿರಾಜ್ ಎಂಬುವವರು ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕೆಲವು ದಿನಗಳ ಹಿಂದೆ ನಡೆದ ನಾಗಮಂಟಪ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಜೀವಂತ ಹಾವನ್ನು ಹಿಡಿದುಕೊಂಡು ಸದ್ಗುರು ಜಗ್ಗಿ ವಾಸುದೇವ್ ಅವರು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು.

ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಉಲ್ಲಂಘನೆಯಾಗಿದೆ. ಜಗ್ಗಿ ವಾಸುದೇವ್ ವಿರುದ್ಧ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!