February 4, 2026

ಅತೀ ವೇಗದಿಂದ ಬಂದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ: ಅಡ್ಯಾರ್- ಕಣ್ಣೂರಿನ‌ ಬಾಲಕ ಸಾವು

0
image_editor_output_image-888317427-1665998070766.jpg

ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಭಾಗ್‌ ಬಳಿ ನಡೆದಿದೆ.

ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.

ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಶವದ ತೆರವು ಕಾರ್ಯಾಚರಣೆ ನಡೆಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಬಾಲಕ ಪಡೀಲ್ ಕಣ್ಣೂರಿನ 13 ವರ್ಷದ ಪ್ರಾಯದ ರಕ್ಷಣ್ ಎಂದು ಗುರುತಿಸಲಾಗಿದೆ. ಸವಾರ ನಾರಾಯಣ ಅವರು ಸಂಬಂಧಿ ರಕ್ಷಣ್ ಅವರನ್ನು ಹಿಂಬದಿ ಕುಳ್ಳಿರಿಸಿ ಕೊಟ್ಟಾರ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಯಾವುದೋ ಕಾರ್ಯ ನಿಮಿತ್ತ ಅವರು ಕೊಟ್ಟಾರಕ್ಕೆ ತೆರಳಿ ವಾಪಸ್ ಬರುವ ವೇಳೆ ಅಪಘಾತ ಸಂಭಸಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!