ಪುತ್ತೂರು: ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ, ಪರಿಸರಗಳಲ್ಲಿ ನಡೆದ ಕಳ್ಳತನ ಪ್ರಕರಣ: ಅಂತಾರಾಜ್ಯ ಕಳ್ಳನನ್ನು ಬಂಧಿಸಿದ ಪೊಲೀಸರು
ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಸದ್ರಿ ಕಳ್ಳತನ ಪ್ರಕರಣವನ್ನು ಭೇಧಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣ ರವರ ನೇತೃತ್ವದ ತಂಡ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ಕಣ್ಣೂರು ಕುಟ್ಟಪರಂಬ್ ಕೊಲ್ಲಂ ಪರಂಬಿಲ್ ನಿವಾಸಿ ಮಹಮ್ಮದ್ (42) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು 2,50,000 /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ, ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.
ಪುಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಸೋನಾವಣೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಡಾ.ವೀರಯ್ಯ ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣ, ಸಿಬ್ಬಂದಿಗಳಾದ ಪ್ರೊ.ಪಿಎಸ್‌ಐ ಗಳಾದ ಕಾರ್ತಿಕ್ ಮತ್ತು ಭವಾನಿ, ಎಎಸ್‌ಐ ಮುರುಗೇಶ್, ಹೆಚ್ ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್.ರೈ, ಪ್ರಶಾಂತ್, ಸ್ಕರಿಯ, ಪ್ರಶಾಂತ್ .ರೈ, ಪಿಸಿ ಹರ್ಷಿತ್ ರವರು ಪಾಲ್ಗೊಂಡಿದ್ದರು.





