February 4, 2026

ಸುರತ್ಕಲ್ ಟೋಲ್‌ಗೇಟ್ ಹೋರಾಟಕ್ಕೆ ಬಿಜೆಪಿ ಬೆಂಬಲವೂ ಇದೆ:
೨೦ ದಿನದಲ್ಲಿ ಟೋಲ್ ತೆರವು ಆಗದಿದ್ದಲ್ಲಿ ಕೋರ್ಟ್ ಗೆ ಹೋಗುತ್ತೇನೆ: ನಳಿನ್ ಕುಮಾರ್ ಕಟೀಲ್

0
IMG-20221017-WA0004.jpg

ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಭಾರತೀಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ ಇರುವ ಕಾರಣಕ್ಕೆ ಈ ಹೋರಾಟವನ್ನು ರಾಜಕೀಯವಾಗಿ ಮುಂದುವರೆಸುವುದು ತಪ್ಪು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಂದು ಮಂಗಳೂರಿನಲ್ಲಿ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿ ‘ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ. ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ. ನೋಟಿಸ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ನಾನು ಕಮಿಷನರ್ ಜೊತೆ ಮಾತನಾಡಿದ್ದೇನೆ. ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ನಾನು ಹೋರಾಟಗಾರರ ಜೊತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ.

ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ. ಅದಕ್ಕೆ ಅವಕಾಶ ಕೊಡೋಣ. ತದನಂತರ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡೋಣ ಎಂದು ವಿನಂತಿ ಮಾಡಿದ್ರು. ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ. ಯಾಕಂದ್ರೆ ಇದು ಪ್ರಜಾಪ್ರಭುತ್ವ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು. ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಕಟಿಬದ್ದನಾಗಿದ್ದಿನಿ’ ಎಂದು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!