August 13, 2026

ಮಂಗಳೂರು: ಮನೆಯ ಮಹಡಿಯಿಂದ ಬಿದ್ದು ಯುವಕ‌ ಮೃತ್ಯು

0
IMG-20221018-WA0000.jpg

ಮಂಗಳೂರು: ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ.

ಕುದ್ರೋಳಿ ಸಮೀಪದ ಕಂಡತ್‌ಪಳ್ಳಿ ಬಳಿಯ ಟಿಕೆಎಚ್ ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (33) ಮೃತಪಟ್ಟ ಯುವಕ.

ರಿಯಾಝ್ ಮನೆಯ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ರಿಯಾಝ್‌ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!