ಟ್ರಕ್‌ಗೆ ಬಸ್ ಢಿಕ್ಕಿ: 6 ಮಂದಿ ಮೃತ್ಯು, 15 ಮಂದಿಗೆ ಗಾಯ
ವಡೋದರ: ಅಹಮದಾಬಾದ್–ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಐಷಾರಾಮಿ ಬಸ್ ರಾಜಸ್ಥಾನದಿಂದ ಸೂರತ್‌ಗೆ ತೆರಳುತ್ತಿತ್ತು. ಸೇತುವೆ ಮೇಲೆ ಟ್ರಕ್ ಅನ್ನು ಹಿಂದಿಕ್ಕುವ ಭರದಲ್ಲಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪಾನಿಗೇಟ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ದುರ್ಘಟನೆಯಲ್ಲಿ 6 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ ಎಂದು ಡಿಸಿಪಿ ಯಶ್‌ಪಾಲ್ ಜಗಾನಿಯ ಹೇಳಿದ್ದಾರೆ.
‘ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ’ಎಂದು ಅವರು ತಿಳಿಸಿದ್ದಾರೆ.
ಮೃತರಲ್ಲಿ ಒಂದು ಮಗು, ಒಬ್ಬ ಮಹಿಳೆ ಮತ್ತು ನಾಲ್ವರು ಪುರುಷರು ಸೇರಿದ್ದಾರೆ.




