ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಕೊರಟಗೆರೆ : ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂಬ ಕಾರಣಕ್ಕೆ ಪಿಯು ಕಾಲೇಜಿನ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ಗುಣಶ್ರೀ (16 ವರ್ಷ) ವಿದ್ಯಾರ್ಥಿನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕದ ಜಮೀನೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಿಯದರ್ಶಿನಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಗುಣಶ್ರೀಗೆ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದ ಕಾರಣಕ್ಕೆ ಹೆದರಿ ಕಾಲೇಜು ಸಮೀಪದ ಜಮೀನಿನಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಸಿಪಿಐ ಸುರೇಶ್, ಪಿಎಸ್ ಐ ಚೇತನ್ ಕುಮಾರ್, ಎಎಸ್ ಐ ಯೋಗಿಶ್, ಸಂಜೀವರಾಜು ಸ್ಥಳಕ್ಕೆ ಬೇಟಿ ಪರಿಶೀಲನೆ ನಡೆಸಿದ್ದಾರೆ.




