ಚಿಕ್ಕಮಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಇಬ್ಬರನ್ನು ಬಂಧಿಸಿದ ಕೇರಳ ಪೊಲೀಸರು
ಚಿಕ್ಕಮಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡು ಭೂಗತರಾಗಿದ್ದ ಇಬ್ಬರು ನಕ್ಸಲರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಗ್ರಾಮ ಪಂಚಾಯತ್ ವ್ಯಾಪಿಯ ಬಿ.ಜಿ. ಕೃಷ್ಣಮೂರ್ತಿ ಹಾಗೂ ಕಳಸ ತಾಲ್ಲೂಕು ಮಾವಿನಕೆರೆ ಗ್ರಾಮದ ಸಾವಿತ್ರಿ ಬಂಧಿತ ನಕ್ಸಲರಾಗಿದ್ದು, ಕೇರಳ ರಾಜ್ಯದ ಸುಲ್ತಾನ್‍ಭತ್ತೇರಿ ಎಂಬಲ್ಲಿ ಬುಧವಾರ ಮುಂಜಾನೆ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಲ್ಲಿ ಬಿ.ಜಿ. ಕೃಷ್ಣಮೂರ್ತಿ ಸಕ್ರೀಯರಾಗಿದ್ದರು. ಕಳಸ ತಾಲ್ಲೂಕು ಸಾವಿತ್ರಿ ಅವರು ನಕ್ಸಲ್ ಚಳವಳಿ ಸೇರಿಕೊಂಡಿದ್ದರು ಎನ್ನಲಾಗುತ್ತಿದೆ.





