February 2, 2026

ಗೋವಾದ ಮೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ BJP

0
image_editor_output_image-1291574369-1666159491598.jpg

ಪಣಜಿ: ಗೋವಾದ ಮೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು,ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾವೋರ್ಲಿಮ್, ರೀಸ್ ಮೈಗೊಸ್ ಮತ್ತು ಕಾರ್ತಲಿಂ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಭಾನುವಾರ ಉಪಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಯಿತು.

ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಬಿಜೆಪಿ ಅಭ್ಯರ್ಥಿಗಳಾದ ಪರೇಶ್ ನಾಯ್ಕ್ (ದಾವೋರ್ಲಿಮ್) ಮತ್ತು ಸಂದೀಪ್ ಕಾಶಿನಾಥ್ ಬಾಂದೋಡ್ಕರ್ (ರೀಸ್-ಮೈಗೋಸ್) ಮತ್ತು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಮೆರ್ಸಿಯಾನಾ ಮೆಂಡೆಸ್ ಇ ವಾಜ್ (ಕಾರ್ತಲಿಂ) ಗೆಲುವು ಸಾಧಿಸಿದ್ದಾರೆ.

ಈ ವರ್ಷ ಫೆಬ್ರವರಿಯಲ್ಲಿ ನಡೆದ ಗೋವಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಈ ಮೂರು ಕ್ಷೇತ್ರಗಳ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನ ಉಪ ಚುನಾವಣೆ ನಡೆದಿತ್ತು.

Leave a Reply

Your email address will not be published. Required fields are marked *

error: Content is protected !!