February 3, 2026

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

0
176-1660500668.jpg

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ 24 ವರ್ಷಗಳ ನಂತರ ಗಾಂಧಿ ಕುಟುಂಬೇತರ ನಾಯಕರು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷರಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್‌ ಅವರನ್ನು ಸೋಲಿಸಿ, ಎಐಸಿಸಿ ಅಧ್ಯಕ್ಷ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪರಾಜಿತ ಅಭ್ಯರ್ಥಿ ಶಶಿ ತರೂರ್‌ ಅವರು ಖರ್ಗೆ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಒಟ್ಟು 9385 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದರೆ, ಶಶಿ ತರೂರ್‌ ಅವರು ಕೇವಲ 1072 ಮತಗಳನ್ನು ಪಡೆಯಲಷ್ಟೇ ಶಕ್ತರಾಗಿದ್ದಾರೆ.

ಖರ್ಗೆ ಗೆಲುವಿನ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ದೆಹಲಿಯ ಕಾಂಗ್ರೆಸ್‌ ಕೇಂದ್ರ ಕಚೇರಿ ಬಳಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!