February 3, 2026

ಬಂಟ್ವಾಳ: ಕೊಲೆ ಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
Screenshot_2022_1019_185110.jpg

ಬಂಟ್ವಾಳ: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘ ಅವಧಿಯಿಂದ (LPC) ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಜತ್ತೂರು ಗ್ರಾಮದ ತೂಮಿನಾಡು ನಿವಾಸಿ ಯಾಕೂಬ್ ಅವರ ಮಗ ಮಹಮ್ಮದ್ ಫಾರೂಕ್ ಎಂಬಾತ ಬಂಧಿತ ಆರೋಪಿ.

ಬಂಟ್ವಾಳ ‌ನಗರ ಪೋಲಿಸ್ ಠಾಣಾ ವ್ಯಾಪ್ತಿಯ ‌ಬಿ.ಸಿ ರೋಡಿನಲ್ಲಿ 2007 ರ ಇಸವಿಯಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ವ್ಯಕ್ತಿಯೋರ್ವನ ಕೊಲೆಯತ್ನ ನಡೆಸಿದ ಆರೋಪದಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ 15 ವರ್ಷಗಳಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದ.

ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ , ಬಂಟ್ವಾಳ ನಗರ ಪೋಲಿಶ್ ಇನ್ಸ್ ಪೆಕ್ಟರ್ ವಿವೇಕನಂದ ಹಾಗೂ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ಧನರಾಜ್, ಗಣೇಶ್, ರಾಜೇಶ್, ಇರ್ಷಾದ್ ಅವರ ತಂಡ ಆರೋಪಿಯನ್ನು ಕೇರಳ ರಾಜ್ಯದ ಬಂದ್ಯೋಡು ಎಂಬಲ್ಲಿಂದ ದಸ್ತಗಿರಿ ಮಾಡಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!