February 2, 2026

ದ.ಕ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ವಾಹನದಲ್ಲಿ ಸೀಟ್ ಬೆಲ್ಟ್ ಕಡ್ಡಾಯ

0
IMG-20221020-WA0008.jpg

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ವಾಹನದಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು ತಕ್ಷಣದಿಂದಲೇ ಜಾರಿಗೆ ಬಂದಿದೆ.

ಒಂದು ವೇಳೆ ಸೀಟ್‍ಬೆಲ್ಟ್ ಧರಿಸದಿದ್ದರೆ ಇಂದಿನಿಂದಲೇ ಜಾರಿಗೆ ಬರುವಂತೆ 1 ಸಾವಿರ ರೂ. ದಂಡ ವಿಧಿಸಲು ಆದೇಶ ಹೊರಡಿಸಲಾಗಿದೆ.

ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆ ಪ್ರಕಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ಹೊಸ ಆದೇಶ ಹೊರಡಿಸಿದ್ದು, ಸೀಟ್‍ಬೆಲ್ಟ್ ಧರಿಸದೆ ಸಿಕ್ಕಿಹಾಕಿಕೊಂಡರೆ 1 ಸಾವಿರ ರೂ. ದಂಡ ಪಾವತಿ ಬೇಕಾಗಿದೆ. ಅಲ್ಲದೆ, ಈ ಹಿಂದೆ 500 ರೂ. ಇದ್ದ ದಂಡವನ್ನು ಪರಿಷ್ಕೃತ ಆದೇಶದಲ್ಲಿ ದುಟ್ಟಪ್ಪು ಮಾಡಲಾಗಿದೆ.

ಮೈಸೂರು ನಗರ, ಹುಬ್ಬಳ್ಳಿ, ಧಾರವಾಡ ನಗರ, ಮಂಗಳೂರು ನಗರ, ಬೆಳಗಾವಿ ಮತ್ತು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಿಗೆ ಹಾಗೂ ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಈ ಆದೇಶವನ್ನು ಹೊರಡಿಸಲಾಗಿದೆ.

ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ನಿಧನದ ಬಳಿಕ ಕೇಂದ್ರ ಸರ್ಕಾರ ಪ್ರಯಾಣಿಕರು ಸುರಕ್ಷತೆಗೆ ಕಠಿಣ ನಿಯಮ ತೆಗೆದುಕೊಂಡಿದೆ.

ಎಲ್ಲಾ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸಬೇಕು ಎಂದಿದೆ. ಈ ಕುರಿತು ಕೇಂದ್ರ ರಸ್ತೆ ಮತ್ತು ಸಾರಿಗೆ ಇಲಾಖೆ ರಾಜ್ಯಗಳಿಗೆ ಆದೇಶ ನೀಡಿದೆ. ಅಲ್ಲದೆ, ನ.1ರಿಂದ ಜಾರಿಗೆ ಬರುವಂತೆ ಹೊಸದಿಲ್ಲಿ, ಮುಂಬೈನಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್‍ಬೆಲ್ಟ್ ಕಡ್ಡಾಯಗೊಳಿಸಲಾಗಿದೆ.

ಈ ಬೆನ್ನಲ್ಲೇ ರಾಜ್ಯದಲ್ಲೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ.

Leave a Reply

Your email address will not be published. Required fields are marked *

error: Content is protected !!