‘ಕಾಂಗ್ರೆಸ್ ಪಕ್ಷದವರೇ ಪಿಎಸ್ಐ. ನೇಮಕಾತಿ ಅಕ್ರಮದ ರೂವಾರಿಗಳು’- ಬೊಮ್ಮಾಯಿ
ಕಾಂಗ್ರೆಸ್ ಪಕ್ಷದವರೇ ಪಿ.ಎಸ್.ಐ ನೇಮಕಾತಿ ಅಕ್ರಮದಲ್ಲಿ ರೂವಾರಿಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಹುಲ್ ಗಾಂಧಿಗೆ ದೇಶ ಹಾಗೂ ಕರ್ನಾಟಕದ ಬಗ್ಗೆ ಗೊತ್ತಿಲ್ಲ. ಕರ್ನಾಟಕದ ಜನರ ಭಾವನೆಗಳೂ ತಿಳಿದಿಲ್ಲ. ಅವರ ಕಾಲದ ಎಲ್ಲಾ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಕಳುಹಿಸಲಾಗುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಲ್ಲ ಎಂದು ಹೇಳಿದ್ದಾರೆ. ಈ ಹುಡುಗ ಏನೂ ಆಗುವುದಿಲ್ಲ ಎಂದು ನಮಗೆ 15 ವಷರ್ಗಳಿಗೆ ಮುಂಚೆಯೇ ಗೊತ್ತಿತ್ತು. ಆದರೆ ಕಾಂಗ್ರೆಸ್ಸಿಗರ ಬೆನ್ನು ಹತ್ತಿದ್ದಾರೆ. ರಾಹುಲ್ ಗಾಂಧಿ ಯಾವತ್ತೂ ಪ್ರಧಾನಿ ಆಗುವುದಿಲ್ಲ ಎಂದರು.

ಇನ್ನಿ ಕಾಂಗ್ರೆಸ್ ಕಾಲದ ಹಗರಣಗಳ ಬಗ್ಗೆ ಈಗಾಗಲೇ ತನಿಖೆಯಾಗುತ್ತಿದ್ದು, ರಾಹುಲ್ ಗೆ ಕೊಡುತ್ತೇನೆ ಎಂದರೆ ಅವರಿಗೆ ಭಯ ಶುರುವಾಗಿದೆ. ಇಂಥವರನ್ನು ಕಟ್ಟಿಕೊಂಡು ನಡೆದರೆ ಇವರ ಮೇಲೆ ನಿಮ್ಮ ಪಕ್ಷದಲ್ಲಿ ಏನಾದರೂ ಕ್ರಮ ತೆಗೆದುಕೊಳ್ಳಲಾಗುವುದೇ ಎಂದು ಪ್ರಶ್ನೆ ಮಾಡುತ್ತಿದ್ದೇನೆ ಎಂದಿದ್ದಾರೆ..
ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಭಾಷಣದಲ್ಲಿ ಹೇಳಿ 70 ವರ್ಷ ಆಡಳಿತ ಮಾಡಿದರು. ಮೀಸಲಾತಿಯ ಬೇಡಿಕೆ ಐದು ದಶಕಗಳದ್ದು. ದುರ್ಬಲ ವರ್ಗದವರು ಹೇಗಿದ್ದಾರೆ ಎಂದು ತಿರುಗಿ ನೋಡಲು ಅವರಿಗೆ ಸಮಯವೇ ಸಿಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.




