February 2, 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ. 30 ರವರೆಗೆ ಜಾನುವಾರುಗಳ ಸಾಗಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ

0
Screenshot_2022-10-21-10-39-46-07_680d03679600f7af0b4c700c6b270fe7.jpg

ಮಂಗಳೂರು: ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ. 30 ರವರೆಗೆ ಜಾನುವಾರುಗಳ ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.

ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

ಇದರೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!