ಕುಂದಾಪುರ: ಕಳವು ಪ್ರಕರಣದ ಆರೋಪಿಯನ್ನು ಜೈಲಿಗೆ ಕರೆದೊಯ್ಯುವಾಗ ಪೊಲೀಸರಿಂದ ಎಸ್ಕೇಪ್
ಕುಂದಾಪುರ: ಕಳವು ಪ್ರಕರಣದ ಆರೋಪಿಯನ್ನು ಜೈಲಿಗೆ ಕರೆದೊಯ್ಯುವಾಗ ಪೊಲೀಸರಿಂದ ಎಸ್ಕೇಪ್ ಆದ ಘಟನೆ ಗುರುವಾರ ನಡೆದಿದೆ.
ಭಟ್ಕಳ ಮೂಲದ ಮೊಹಮ್ಮದ್ ರಾಹಿಕ್ (22) ಪರಾರಿಯಾದ ಆರೋಪಿಯಾಗಿದ್ದು. ಕೆಲ ತಿಂಗಳ ಹಿಂದೆ ಬೀಜಾಡಿ ಸಮೀಪದಲ್ಲಿ ಮೊಬೈಲ್ ಅಂಗಡಿ ಕಳವು ಪ್ರಕರದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು ಎನ್ನಲಾಗಿದೆ.
ಮೊಬೈಲ್ ಅಂಗಡಿಯಲ್ಲಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು. ಆತನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕದ ಸಬ್ ಜೈಲಿಗೆ ಕರೆದೊಯ್ಯುವಾಗ ಜೈಲ್ ಸಮೀಪದಿಂದ ಇಬ್ಬರು ಪೊಲೀಸರಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ. ಸದ್ಯ ಪರಾರಿಯಾದ ಆರೋಪಿ ರಾಹಿಕ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.




